AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ತಂದೆ ಸಚಿವರಾಗಿದ್ದಾಗಲೂ ಆರ್​ಎಸ್​ಎಸ್ ಪಥಸಂಚಲನ ನಡೆದಿದೆ, ನಿರುದ್ಯೋಗಿ ತರ ವರ್ತಿಸಬೇಡಿ’: ಖರ್ಗೆಗೆ ಜೋಶಿ ಟಾಂಗ್

‘ನಿಮ್ಮ ತಂದೆ ಸಚಿವರಾಗಿದ್ದಾಗಲೂ ಆರ್​ಎಸ್​ಎಸ್ ಪಥಸಂಚಲನ ನಡೆದಿದೆ, ನಿರುದ್ಯೋಗಿ ತರ ವರ್ತಿಸಬೇಡಿ’: ಖರ್ಗೆಗೆ ಜೋಶಿ ಟಾಂಗ್

ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 23, 2026 | 2:49 PM

Share

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ತೀವ್ರವಾಗಿದ್ದರೂ ಸಚಿವರು ಉದ್ಯೋಗವಿಲ್ಲದವರಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ಆರ್‍ಎಸ್‌ಎಸ್ ಪಥಸಂಚಲನ ಕುರಿತು ಗೃಹ ಸಚಿವ ಪ್ರಿಯಾಂಕ ಖರ್ಗೆಗೆ ಟಾಂಗ್ ನೀಡಿದ ಜೋಶಿ, ರಾಜಕೀಯ ಅಧಃಪತನ ತಂದ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಆಗ್ರಹಿಸಿದರು.

ಹುಬ್ಬಳ್ಳಿ, ಅಕ್ಟೋಬರ್ 23: ವಿಜಯದಶಮಿ ವೇಳೆ ಆರ್​​ಎಸ್​ಎಸ್ ಪಥಸಂಚಲನ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದ್ದರೂ ಸರ್ಕಾರ ಮತ್ತು ಸಚಿವರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದರು. ಪ್ರಿಯಾಂಕ ಖರ್ಗೆ ಅವರನ್ನು ಉದ್ದೇಶಿಸಿ, ‘‘ನಿಮ್ಮ ತಂದೆ 25 ವರ್ಷ ಹಿಂದೆ ಸಚಿವರಾಗಿದ್ದಾಗಲೂ ಆರ್‍ಎಸ್‌ಎಸ್ ಪಥಸಂಚಲನ ನಡೆದಿತ್ತು, ಆ ನಂತರ ಬೇರೆಯವರು ಸಚಿವರಾದಾಗಲೂ ನಡೆದಿದೆ’’ ಎಂದು ಟಾಂಗ್ ನೀಡಿದರು. ಪ್ರಿಯಾಂಕ್ ಖರ್ಗೆ ಬೇರೆ ಕೆಲಸವಿಲ್ಲದವರಂತೆ ವರ್ತಿಸುವುದನ್ನು ಬಿಟ್ಟು ಬರ ಪರಿಹಾರ ಕಾರ್ಯ ಮತ್ತು ಕಾನೂನು ಸುವ್ಯವಸ್ಥೆಯತ್ತ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಕರ್ನಾಟಕದಲ್ಲಿ ರಾಜಕೀಯ ಅಧಃಪತನ ಪ್ರಾರಂಭವಾಗಿದೆ ಎಂದು ಜೋಶಿ ಆತಂಕ ವ್ಯಕ್ತಪಡಿಸಿದರು. ಒಬ್ಬ ಹಿರಿಯ ನಾಯಕರಿಗೆ ಪೆನ್ ಡ್ರೈವ್ ತೋರಿಸಿ ರಾಜೀನಾಮೆ ಕೊಡಿಸಿದ್ದಾರೆ ಎಂಬ ಆರೋಪ ಕರ್ನಾಟಕದ ಘನತೆಗೆ ದೊಡ್ಡ ಧಕ್ಕೆ ತಂದಿದೆ ಎಂದು ಅಭಿಪ್ರಾಯಪಟ್ಟರು. ಈ ಆರೋಪದ ಹಿಂದೆ ಯಾರು ಇದ್ದಾರೆ ಎಂಬುದನ್ನು ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಬಹಿರಂಗಪಡಿಸಬೇಕು. ಆಧಾರವಿಲ್ಲದೆ ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More