RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಮುಖ್ಯಾಂಶಗಳು
- RSS ಪಥಸಂಚಲನಕ್ಕೆ ಕೆಲವೆಡೆ ಅನುಮತಿ ನೀಡದ ವಿಚಾರ
- ಸಹಿಷ್ಣುತೆ ಪಾಠ ಮಾಡೋರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ
- ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆಯು ಸ್ಟಿಂಗ್ ವಿಷಯದಿಂದ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರದ ತಂತ್ರ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮೂಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ, ಅಕ್ಟೋಬರ್ 25: ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೆಲವು ಕಡೆ ಅನುಮತಿ ನಿರಾಕರಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ಸಹಿಷ್ಣುತೆ ಪಾಠ ಮಾಡೋರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಕಳೆದ 70 ವರ್ಷದಿಂದ ದೇಶದಲ್ಲಿ ಪಥಸಂಚಲನ ನಡೆಯುತ್ತಿದೆ. ನೀತಿ ಸಂಹಿತೆ ಇದೆ ಅಂತಾ ಅನೇಕ ಕಡೆ ಕಾರಣ ನೀಡಿದ್ದಾರೆ. ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಇದನ್ನು ಮಾಡುತ್ತಿದ್ದಾರೆ. ಯತಿಂದ್ರ ನಮ್ಮ ಪಕ್ಷದವರೇ ಇದ್ದಾರೆ ಎಂದು ಹೇಳಿದ್ದು, ಇದರಿಂದ ಕಾಂಗ್ರೆಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಹೀಗಾಗಿ ಡೈವರ್ಟ್ ಮಾಡಲು ಈ ರೀತಿ ಮಾಡ್ತಿದ್ದಾರೆ. ಸಿಎಂ ಮೊದಲ ಭಾಷಣ ಏನು ಮಾಡಿದರೆಂದು ನೆನಪಿಸಿಕೊಳ್ಳಲಿ’ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 25, 2026 03:43 PM
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು

