RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ

Edited By:

Updated on: Oct 25, 2026 | 3:44 PM

ಮುಖ್ಯಾಂಶಗಳು

  • RSS ಪಥಸಂಚಲನಕ್ಕೆ ಕೆಲವೆಡೆ ಅನುಮತಿ ನೀಡದ ವಿಚಾರ
  • ಸಹಿಷ್ಣುತೆ ಪಾಠ ಮಾಡೋರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ
  • ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆಯು ಸ್ಟಿಂಗ್ ವಿಷಯದಿಂದ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರದ ತಂತ್ರ ಎಂದು ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮೂಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ, ಅಕ್ಟೋಬರ್​​ 25: ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೆಲವು ಕಡೆ ಅನುಮತಿ ನಿರಾಕರಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ಸಹಿಷ್ಣುತೆ ಪಾಠ ಮಾಡೋರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಕಳೆದ 70 ವರ್ಷದಿಂದ ದೇಶದಲ್ಲಿ ಪಥಸಂಚಲನ ನಡೆಯುತ್ತಿದೆ. ನೀತಿ ಸಂಹಿತೆ ಇದೆ ಅಂತಾ ಅನೇಕ ಕಡೆ ಕಾರಣ ನೀಡಿದ್ದಾರೆ. ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಇದನ್ನು ಮಾಡುತ್ತಿದ್ದಾರೆ. ಯತಿಂದ್ರ ನಮ್ಮ ಪಕ್ಷದವರೇ ಇದ್ದಾರೆ ಎಂದು ಹೇಳಿದ್ದು, ಇದರಿಂದ ಕಾಂಗ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಹೀಗಾಗಿ ಡೈವರ್ಟ್ ಮಾಡಲು ಈ ರೀತಿ ಮಾಡ್ತಿದ್ದಾರೆ. ಸಿಎಂ ಮೊದಲ ಭಾಷಣ ಏನು ಮಾಡಿದರೆಂದು ನೆನಪಿಸಿಕೊಳ್ಳಲಿ’ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 25, 2026 03:43 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More