ಕ್ರೆಡಿಟ್ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆ ಶಿವಕುಮಾರ್ ವಿರುದ್ಧ ಜೋಶಿ ಕಿಡಿ
ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಅಭಿಮಾನಿಗಳು ಸಾವನ್ನಪ್ಪಿದ ಘಟನೆಯ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದ ನೈತಿಕ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದಾರೆ ಮತ್ತು ಡಿಕೆಶಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ.
ಮೈಸೂರು, ಜೂನ್ 06: ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ರಾಜ್ಯ ಸರ್ಕಾರವೇ ನೈತಿಕ ಹೊಣೆ ಹೊರಬೇಕು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸ್ನಾನ ಮಾಡುವವರ ಕೆಳಗೆ ಕುಳಿತು ಸ್ನಾನ ಮಾಡುವ ರೀತಿ ಡಿಕೆ ಶಿವಕುಮಾರ್ ನಡೆದುಕೊಂಡಿದ್ದಾರೆ. ಅವರು ತಮ್ಮನ್ನು ತಾವು ಕೋಚ್ ಎಂದುಕೊಂಡಿದ್ದಾರೆ. ಸಾಧನೆ ಮಾಡಿದವರ ಜೊತೆ ನಿಂತು ಕ್ರೆಡಿಟ್ ತೆಗೆದುಕೊಳ್ಳುವ ಚಟ ನಿಮಗೆ ಎಂದು ಜೋಶಿ ವಾಗ್ದಾಳಿ ಮಾಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
