ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡ್ತಿಲ್ಲ ಎಂದಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 13: ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ಐದಾರು ವರ್ಷಗಳಿಂದ ಕೇಂದ್ರ ಸರ್ಕಾರ ಹುದ್ದೆ ಭರ್ತಿ ಮಾಡ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
