ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್​ ಜೋಶಿ ತಿರುಗೇಟು

Edited By:

Updated on: Jul 12, 2026 | 8:11 PM

ಮುಖ್ಯಾಂಶಗಳು

  • ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ತಿರುಗೇಟು
  • RSS ಬೈದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಮಾಧ್ಯಮಗಳಲ್ಲಿ ಜಾಗ ಸಿಗ್ತಿದೆ
  • ಬಾಲಿಶತನದ ಹೇಳಿಕೆಗೆ ಉತ್ತರ ನೀಡುವ ಅಗತ್ಯವಿಲ್ಲ

ಆರ್‌ಎಸ್‌ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.

ಬಾಗಲಕೋಟೆ, ಜುಲೈ 12: ‘‘RSS ಬೈದಿದ್ದಕ್ಕೆ ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಮಾಧ್ಯಮಗಳಲ್ಲಿ ಜಾಗ ಸಿಗುತ್ತಿದೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ಬಾಲಿಶತನದ ಹೇಳಿಕೆಗೆ ಉತ್ತರ ನೀಡುವ ಅಗತ್ಯವಿಲ್ಲ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಆ ಮೂಲಕ RSS​ ಸಭೆ ನಂತರ ಗಲಭೆಗಳಾಗುತ್ತವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್​ ಜೋಶಿ, ‘‘ಅದರ ಬಗ್ಗೆ ಕ್ರಮಕೈಗೊಳ್ಳಲು ಹೇಳಿ ಯಾರು ಬೇಡ ಅಂದಿದ್ದಾರೆ. ಪೆಡ್ಲರ್​ಗಳನ್ನು ಯಾಕೆ ಬಂಧಿಸಿಲ್ಲ ಅಂತಾ ನೀವು ಪ್ರಶ್ನಿಸಬಾರದು, ಅದಕ್ಕಾಗಿಯೇ ಅವರು ಈ ರೀತಿ ಹೇಳುತ್ತಿದ್ದಾರೆ. ಪ್ರಿಯಾಂಕ್ ಹೇಳಿಕೆಗೆ ಉತ್ತರ ನೀಡಬೇಡಿ ಅಂತಾ ನಮ್ಮವರಿಗೆ ಹೇಳಿದ್ದೀನಿ. ಸರಸಂಘಚಾಲಕ ಮೋಹನ್ ಭಾಗವತ್ ಒಮ್ಮೆ ಉತ್ತರ ಕೊಟ್ಟಿದ್ದಾರೆ. ಅದಾದ ನಂತರ ಏನೂ ಹೇಳಿಲ್ಲ, ಅವರ ಕೆಲಸ ಮಾಡಿಕೊಂಡು ಇದ್ದಾರೆ. ಈ ನೂರು ವರ್ಷಗಳಲ್ಲಿ ಇಂತಹವನ್ನೆಲ್ಲಾ ಬಹಳ ನೋಡಿ ಆಗಿದೆ. BJP ಮತ್ತು ಸಂಘದ ಅನೇಕ ಸಂಘಟನೆಗಳು ಅನೇಕ ವರ್ಷಗಳಿಂದ ಇವೆ. ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ. ರಿಜಿಸ್ಟ್ರೇಷನ್ ರಿಜಿಸ್ಟ್ರೇಷನ್ ಅಂತಾರಾ, ಏನು ಮಾಡುತ್ತಾರೆ ನೋಡೋಣ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More