ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು, ತನ್ನ ಶಾಸಕರನ್ನು ರಕ್ಷಿಸುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ. ಈ ಗಲಭೆಯ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು, ಜನವರಿ 03: ಬಳ್ಳಾರಿ ಗಲಭೆ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಶಾಸಕ ಭರತ್ ರೆಡ್ಡಿಯನ್ನು ಕಾಪಾಡಲು ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಸತ್ತಿರುವುದು ಪೊಲೀಸರ ಗುಂಡಿನಿಂದ ಅಲ್ಲ ಎಂಬುದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿಯನ್ನು ಕೊಲ್ಲುವ ಉದ್ದೇಶ ಇತ್ತಾ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
