AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆ: ಪ್ರತಿಭಟನೆ ನಿಲ್ಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆ: ಪ್ರತಿಭಟನೆ ನಿಲ್ಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ

ಭಾವನಾ ಹೆಗಡೆ
|

Updated on: Oct 13, 2026 | 11:12 AM

Share

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರೈತರಲ್ಲಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ. ಸರ್ಕಾರ ನಿಮ್ಮೊಂದಿಗೆ ಇದೆ, ಸಮಸ್ಯೆಗಳ ಪರಿಹಾರಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಎಥೆನಾಲ್ ಬ್ಲೆಂಡಿಂಗ್ ಹೆಚ್ಚಳ, ಎಸ್ಎಪಿ ನಿಗದಿ ಹಾಗೂ ತೂಕದ ಸಮಸ್ಯೆಗಳ ಕುರಿತು ಕ್ರಮಕ್ಕೆ ಭರವಸೆ ನೀಡಿದ್ದಾರೆ.

ದೆಹಲಿ, ಅಕ್ಟೋಬರ್ 13: ಕಬ್ಬಿಗೆ ಎಂಎಸ್‌ಪಿ (MSP) ದರ ನಿಗದಿಗೆ ಆಗ್ರಹಿಸಿ ರಾಜ್ಯದಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರೈತರಲ್ಲಿ ಸುಗಮ ಸಂಧಾನಕ್ಕೆ ಮನವಿ ಮಾಡಿದ್ದಾರೆ. “ಸರ್ಕಾರ ರೈತರ ಪರವಾಗಿದ್ದು, ಉದ್ವೇಗಕ್ಕೆ ಒಳಗಾಗದೆ ಪ್ರತಿಭಟನೆ ಕೈಬಿಡಬೇಕು” ಎಂದು ವಿನಂತಿಸಿದರು.

ರಾಜ್ಯ ಆಡಳಿತ ಬೆಲೆ (SAP) ನಿಗದಿ, ತೂಕದಲ್ಲಿ ಆಗುವ ಮೋಸ ಹಾಗೂ ರಿಕವರಿ ರೇಟ್ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಎಥೆನಾಲ್ ಬ್ಲೆಂಡಿಂಗ್ ಪ್ರಮಾಣವನ್ನು ಶೇ. 1.5 ರಿಂದ ಶೇ. 20 ಕ್ಕೆ ಹೆಚ್ಚಿಸಲಾಗಿದ್ದು, ಸರ್ಕಾರ ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ರಸ್ತೆ ತಡೆಯುವ ಬದಲು ಮಾತುಕತೆಯ ಮೂಲಕವೇ ಪ್ರತಿಯೊಂದು ಸಮಸ್ಯೆಯನ್ನೂ ಆದಷ್ಟು ಬೇಗ ಪರಿಹರಿಸಿಕೊಳ್ಳೋಣ ಎಂದು ಜೋಶಿ ತಿಳಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿಯ ಮಯೂರಿ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರೈತರಿಂದ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿರುವುದರಿಂದ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಎತ್ತರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ.

ಇನ್ನಷ್ಟು ವೀಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More