Assembly Polls: ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಮೋದ್ ಮುತಾಲಿಕ್ ನಿರ್ಧಾರ

Assembly Polls: ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಮೋದ್ ಮುತಾಲಿಕ್ ನಿರ್ಧಾರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 23, 2023 | 2:38 PM

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮುತಾಲಿಕ್ ಹಿಂದೂತ್ವದ ಪರ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಹೇಳಿದರು.

ಉಡುಪಿ:  ಇದು ಕುತೂಹಲಕಾರಿ ಸಂಗತಿ. ಇದುವರೆಗೆ ರಾಜಕಾರಣದ ಬಗ್ಗೆ ಒಲವು ತೋರದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಅವರು ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ (assembly polls) ಕಾರ್ಕಳ (Karkala) ಕ್ಷೇತ್ರದಿಂದ ಪಕ್ಷೇತರ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. 7-8 ಬಾರಿ ಕ್ಷೇತ್ರದಲ್ಲಿ ಸುತ್ತಾಡಿರುವ ತನಗೆ ಅಲ್ಲಿನ ಹಿಂದೂಗಳಿಗೆ ಆಗಿರುವ ಅನ್ಯಾಯ ಮತ್ತು ತಾಂಡವಾಡುತ್ತಿರುವ ಭ್ರಷ್ಟಾಚಾರ ಗಮನಕ್ಕೆ ಬಂದಿದೆ ಮತ್ತು ಜನ ಸಹ ತಾನು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮುತಾಲಿಕ್ ಹಿಂದೂತ್ವದ ಪರ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ