ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಸರ್ಜನೆಗೆ ಮೊದಲು ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ

ಅರುಣ್​ ಕುಮಾರ್​ ಬೆಳ್ಳಿ

Updated on: Sep 21, 2023 | 1:09 PM

ಗಣೇಶ ಉತ್ಸವ ಆಚರಿಸಲು ಅಡಚಣೆ ಉಂಟುಮಾಡುವ ಪ್ರಯತ್ನ ಮತ್ತೊಮ್ಮೆ ಮಾಡಿದರೆ ಮಸೀದಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ವಿವಾದಾತ್ಮಕ ಹೇಳಿಕೆಯನ್ನು ಮುತಾಲಿಕ್ ನೀಡಿದರು. ಸೌಹಾರ್ದತೆಯ ಹಿನ್ನೆಲೆಯಲ್ಲಿ ಹಿಂದೂಗಳು ಇದುವರೆಗೆ ತಾಳ್ಮೆವಹಿಸಿಕೊಂಡು ಬಂದಿದ್ದಾರೆ, ಮುಸಲ್ಮಾನರು ಸಹ ಅದಕ್ಕಾಗಿ ಪ್ರಯತ್ನಿಸಬೇಕು, ಒಂದೇ ಕೈಯಿಂದ ಚಪ್ಪಾಳೆ ತಟ್ಟಲಾಗದು ಎಂದು ಮುತಾಲಿಕ್ ಹೇಳಿದರು.

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Eidgah Maidan) ಮೂರು ದಿನಗಳ ಹಿಂದೆ ಪ್ರತಿಷ್ಠಾಪಿಸಲಾಗಿದ್ದ ವಿಘ್ನ ವಿನಾಶಕ ಗಣೇಶನ ವಿಸರ್ಜನೆ ಇವತ್ತು ನಡೆಯಲಿದ್ದು ಭರ್ಜರಿ ತಯಾರಿಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅನುಮತಿ ನೀಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದ ಅಂಜುಮನ್ ಕಮಿಟಿ (Anjuman Committee) ವಿರುದ್ಧ ವಾಗ್ದಾಳಿ ನಡೆಸಿದರು. ಗಣೇಶ ಉತ್ಸವ ಆಚರಿಸಲು ಅಡಚಣೆ ಉಂಟುಮಾಡುವ ಪ್ರಯತ್ನ ಮತ್ತೊಮ್ಮೆ ಮಾಡಿದರೆ ಮಸೀದಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ವಿವಾದಾತ್ಮಕ ಹೇಳಿಕೆಯನ್ನು ಮುತಾಲಿಕ್ ನೀಡಿದರು. ಸೌಹಾರ್ದತೆಯ ಹಿನ್ನೆಲೆಯಲ್ಲಿ ಹಿಂದೂಗಳು ಇದುವರೆಗೆ ತಾಳ್ಮೆವಹಿಸಿಕೊಂಡು ಬಂದಿದ್ದಾರೆ, ಮುಸಲ್ಮಾನರು ಸಹ ಅದಕ್ಕಾಗಿ ಪ್ರಯತ್ನಿಸಬೇಕು, ಒಂದೇ ಕೈಯಿಂದ ಚಪ್ಪಾಳೆ ತಟ್ಟಲಾಗದು ಎಂದು ಮುತಾಲಿಕ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.