AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Muthalik: ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರಮೋದ್ ಮುತಾಲಿಕ್; ಕಾರಣವೇನು ಗೊತ್ತಾ? 

Pramod Muthalik: ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರಮೋದ್ ಮುತಾಲಿಕ್; ಕಾರಣವೇನು ಗೊತ್ತಾ? 

ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 18, 2023 | 2:41 PM

Share

ಕಾಂಗ್ರೆಸ್ ಸರ್ಕಾರ ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಸರ್ಕಾರ(Congress Government) ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು ‘ ದೇವಸ್ಥಾನದ ಪವಿತ್ರತೆ ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ಖಾಸಗಿ ದೇವಸ್ಥಾನಗಳಲ್ಲೂ ಕೂಡ ಮೊಬೈಲ್ ಬ್ಯಾನ್ ಮಾಡುವಂತೆ ವಿನಂತಿ ಮಾಡುತ್ತೇನೆ. ಜೊತೆಗೆ ಖಾಸಗಿ ದೇವಸ್ಥಾನದ ಆಡಳಿತ ಮಂಡಳಿಗೆ ನಮ್ಮೆಲ್ಲಾ ಕಾರ್ಯಕರ್ತರು ಮನವಿ ಕೊಡುತ್ತಾರೆಂದು ಹೇಳಿದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More