ಮೇಕ್ ಇನ್ ಇಂಡಿಯಾ ಬಲಪಡಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್​​​ಗೆ ವಿಘ್ನ

Updated By: ರಮೇಶ್ ಬಿ. ಜವಳಗೇರಾ

Updated on: Dec 10, 2025 | 6:13 PM

ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ’ಯೂನಿಟಿ ಮಾಲ್’ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ‘ಯೂನಿಟಿ ಮಾಲ್‘ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ನೀಡಲಾಗಿತ್ತು.

ಮೈಸೂರು, (ಡಿಸೆಂಬರ್ 10): ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ’ಯೂನಿಟಿ ಮಾಲ್’ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ‘ಯೂನಿಟಿ ಮಾಲ್‘ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ನೀಡಲಾಗಿತ್ತು.

ಮೇಕ್ ಇನ್ ಇಂಡಿಯಾ ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಲ್ಲಿ 193 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಈ ಯುನಿಟಿ ಮಾಲ್ ನಿರ್ಮಾಣಕ್ಕೆ ಮುಂದಾಗಿತ್ತು. ಕೇಂದ್ರದ ಯೋಜನೆ ಎಂದು ಬಿಜೆಪಿ ಸಂಸದ ಯದುವೀರ್ ಸಹ ಭೇಟಿ ನೀಡಿ ಯೂನಿಟಿ ಮಾಲ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದರು. ಆದ್ರೆ, ಇದೀಗ ಯುನಿಟಿ ಮಾಲ್ ನಿರ್ಮಾಣ ಮಾಡದಂತೆ ಕೋರ್ಟ್​​​ನಿಂದ ತಡೆಯಾಜ್ಞೆ ತಂದಿದ್ದಾರೆ.

ರಾಜಮಾತೆ ಪ್ರಮೋದಾದೇವಿಯವರು ’ಯೂನಿಟಿ ಮಾಲ್’ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಯೂನಿಟಿ ಮಾಲ್ ನಿರ್ಮಿಸಲು ಮುಂದಾಗಿರುವ ಜಾಗವು ಮೈಸೂರು ಅರಮನೆಗೆ ಸೇರಿದ್ದು ಎಂದು ತಕರಾರು ಅರ್ಜಿ ಹಾಕಿದ್ದರು. ಹೀಗಾಗಿ ಕೋರ್ಟ್​, ಆ ಜಾಗದಲ್ಲಿ ಯಾವುದೇ ನಿರ್ಮಾಣ ಕಾರ್ಯ ನಡೆಸದಂತೆ ಹಾಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

Published on: Dec 10, 2025 06:13 PM