ಪ್ರತಾಪ್ ಸಿಂಹರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ, ಅವರೊಬ್ಬ ಮಹಾ ಕೋಮುವಾದಿ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 04, 2024 | 12:49 PM

ಮುಸಲ್ಮಾನರನ್ನು ಓಲೈಸುವುದೊಂದೇ ಸಿದ್ದರಾಮಯ್ಯನವರು ಮಾಡಿಕೊಂಡು ಬಂದಿರುವ ರಾಜಕಾರಣವಾಗಿದೆ, ಹಿಂದೆ ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ನಿಜಾಮನ ಆಳ್ವಿಕೆಯನ್ನು ನೆನಪಿಸುವಂತಿದೆ ಸಿದ್ದರಾಮಯ್ಯನವರ ಆಡಳಿತ ವೈಖರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ರವಿವಾರದಂದು ಹೇಳಿದ್ದರು.

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಒಬ್ಬ ಮಹಾನ್ ಕೋಮುವಾದಿ ಎಂದರು. ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಭಾರತದ ಸಂವಿಧಾನವನ್ನು ಯಾವತ್ತೂ ಗೌರವಿಸಿದವರಲ್ಲ, ಸಮಾಜವನ್ನು ಒಡೆಯುವುದಷ್ಟೇ ರಾಜಕಾರಣ ಅಂದೊಕೊಂಡಿದ್ದಾರೆ, ಸಮಾಜವನ್ನು ಒಡೆದು ವೋಟು ಗಿಟ್ಟಿಸುವ ರಾಜಕಾರಣಿ ಅವರು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೊದಲು ನಿಮ್ಮದೇ ಪಕ್ಷದ ನಾಯಕರೊಂದಿಗೆ ಚರ್ಚೆ ಮಾಡಿಕೊಂಡು ಬನ್ನಿ: ವಿಜಯೇಂದ್ರಗೆ ಸಿದ್ದರಾಮಯ್ಯ ತಿರುಗೇಟು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.