ಹುಚ್ಚರನ್ನು ಯಾರಾದ್ರೂ ಬಂಧಿಸಿ ಜೈಲಿಗೆ ಹಾಕುತ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು

Edited By:

Updated on: Oct 01, 2026 | 10:28 AM

‘ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಟೀಕಿಸುತ್ತಲೇ ಇದ್ದೇನೆ. 13 ವರ್ಷಗಳಿಂದ ನಿಂದಿಸುತ್ತಿದ್ದೇನೆ. ಆದರೂ ನನ್ನನ್ನು ಬಂಧಿಸಲಾಗಿಲ್ಲ’ ಎಂಬ ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಪ್ರಕಾಶ್ ರಾಜ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು. ಹುಚ್ಚರನ್ನು ಯಾರಾದರೂ ಬಂಧಿಸುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.

ಮೈಸೂರು, ಅಕ್ಟೋಬರ್ 1: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶದ್ರೋಹಿಗಳು ಎಂದು ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಟ ಪ್ರಕಾಶ್ ರಾಜ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಇಬ್ಬರನ್ನೂ ಸಮಾಜದವರೇ ಹುಚ್ಚರು ಎಂದು ದೂರ ಇಟ್ಟಿದ್ದಾರೆ. ಮೋದಿ ಅವರು 13 ವರ್ಷಗಳಿಂದ ತಮ್ಮನ್ನು ಬಂಧಿಸಿಲ್ಲ ಎಂದು ಪ್ರಕಾಶ್ ರಾಜ್ ಹೇಳುತ್ತಾರೆ. ಹುಚ್ಚರನ್ನು ಯಾರಾದರೂ ಬಂಧಿಸಿ ಜೈಲಿಗೆ ಹಾಕುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಒಬ್ಬರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ. ಮತ್ತೊಬ್ಬರು ಎಂಎಲ್‌ಎ ಗ್ಯಾರಂಟಿ ಶಿಶು ಎಂದು ಪ್ರದೀಪ್ ಈಶ್ವರ್ ಅವರನ್ನು ಉಲ್ಲೇಖಿಸಿ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ. ಐದು ವರ್ಷ ಏನೋ ಮಾತನಾಡಲಿ ಎಂದು ಸುಮ್ಮನೆ ಬಿಟ್ಟಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More