ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಮಹಿಷ ದಸರಾ ಆಚರಣೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಆದ್ರೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಓಪನ್ ಚಾಲೆಂಜ್ ಹಾಕಿದ್ದಾರೆ.

ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
|

Updated on: Sep 23, 2024 | 5:13 PM

ಮೈಸೂರು, (ಸೆಪ್ಟೆಂಬರ್ 23): ಮೈಸೂರಿನಲ್ಲಿ ನಾಡಹಬ್ಬ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ಇದರ ಮಧ್ಯ ಈ ವರ್ಷವೂ ಸಹ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದೆ. ಹೌದು.. ಈ ಬಾರಿಯೂ ಸಹ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಹಿಷ ದಸರಾ ಆಚರಣೆಗೆ ಚಾಮುಂಡಿಬೆಟ್ಟ ಸರಿಯಾದ ಜಾಗವಲ್ಲ. ಮಹಿಷನ ಮೇಲೆ ನಂಬಿಕೆ ಇದ್ದರೆ ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷ ದಸರಾ ಹೆಸರಿನಲ್ಲಿ ಒಡಕು ಮೂಡಿಸಿಕೊಳ್ಳುವುದು ಬೇಡ. ಮುಸ್ಲಿಮರು ಮಹಿಷನನ್ನು ನಂಬಲ್ಲ . ಮಹಿಷನ ಮೆರವಣಿಗೆ ಮೇಲೂ ಮುಸ್ಲಿಮರು ಕಲ್ಲು ಎಸೆಯುತ್ತಾರೆ. ಮಹಿಷ ದಸರಾ ಮಾಡಲು ಚಾಮುಂಡಿಬೆಟ್ಟ ಸರಿಯಾದ ಜಾಗವಲ್ಲ ಎಂದು ಗುಡುಗಿದ್ದಾರೆ.

ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಹಿಂದೂ ಸಮಾಜ ಒಡೆಯುವುದನ್ನು ಬಿಡಿ. ದಸರಾ ಸಂದರ್ಭದಲ್ಲಿ ಅಪಸ್ವರ ಬೇಡ, ಕರ್ಕಶ ಧ್ವನಿ ಬಿಡಿ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮಾಡುತ್ತೇವೆ ಅಂದ್ರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು