Loading video

ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ

Updated By: Ganapathi Sharma

Updated on: Jun 16, 2025 | 11:48 AM

ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರಿಗೆ ಕುರ್ಚಿ ಉಳಿಸಿಕೊಳ್ಳುವುದಷ್ಟೇ ಕೆಲಸ. ಅಭಿವೃದ್ಧಿ ಮಾಡಲ್ಲ. ಜನತೆಗೆ ನ್ಯಾಯ ಒದಗಿಸಿಕೊಡಲ್ಲ ಎಂದು ಪ್ರತಾಪ್ ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಮಾತಿನ ವಿಡಿಯೋ ಇಲ್ಲಿದೆ.

ಮೈಸೂರು, ಜೂನ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸವನ್ನೂ ಮಾಡಿಲ್ಲ. ಅವರು ಕುರ್ಚಿ ಉಳಿಸಿಕೊಳ್ಳುವುದಕ್ಕೋಸ್ಕರ ಜನರ ಗಮನ ಡೈವರ್ಟ್ ಮಾಡುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ. ಅವರದ್ದೇನಿದ್ದರೂ ಕುರ್ಚಿ ಉಳಿಸಿಕೊಳ್ಳುವ ತಂತ್ರದ ರಾಜಕಾರಣ ಅಷ್ಟೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ