ಬಿಜೆಪಿ ಕಾರ್ಯಕರ್ತರ ಜತೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದ್ದಕ್ಕೆ ಕಾರಣ ತಿಳಿಸಿದ ಪ್ರತಾಪ್ ಸಿಂಹ
ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಕುಳಿತು ‘ಕಾಂತಾರ: ಚಾಪ್ಟರ್ 1’ ಚಿತ್ರ ನೋಡಿದ್ದಾರೆ. ಬಳಿಕ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಈ ಸಿನಿಮಾ ಬಗ್ಗೆ ಅವರು ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಪ್ರತಾಪ್ ಸಿಂಹ ಮಾತನಾಡಿದ ವಿಡಿಯೋ ಇಲ್ಲಿದೆ..
ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರು ಬಿಜೆಪಿ ಕಾರ್ಯಕರ್ತರ ಜೊತೆ ಸೇರಿ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ನೋಡಿದ್ದಾರೆ. ಬಳಿಕ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಿಷಬ್ ಶೆಟ್ಟಿ (Rishab Shetty) ನಟನೆಯ ಈ ಸಿನಿಮಾ ಬಗ್ಗೆ ಅವರು ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ‘ಬಹಳಷ್ಟು ಜನ ಕಾರ್ಯಕರ್ತರು ಬಂದಿದ್ದಾರೆ. ಕೆಲವರಿಗೆ ಟಿಕೆಟ್ ಸಿಕ್ಕಿಲ್ಲ. ಅವರಿಗೆ ಸೋಮವಾರ ಮತ್ತೆ ಟಿಕೆಟ್ ಬುಕ್ ಮಾಡಿದ್ದೇನೆ. ಒಟ್ಟಿಗೆ ನೋಡಬೇಕು ಎಂಬುದು ನಮ್ಮ ಆಸೆ ಆಗಿತ್ತು. ಯಾಕೆಂದರೆ, ಇಂಥ ಸಿನಿಮಾಗಳನ್ನು ನೋಡಿದರೆ ನಮ್ಮ ಕನ್ನಡ ಸಿನಿಮಾ ಬೆಳೆಯುತ್ತದೆ’ ಎಂದು ಪ್ರತಾಪ್ ಸಿಂಹ (Pratap Simha) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

