ಮೈಸೂರಿನಲ್ಲಿ ಅನ್ಯ ಕೋಮಿನ ಯುವಕನಿಂದ ಚೈನ್ ಸ್ನಾಚಿಂಗ್ ಯತ್ನ; ಕಳ್ಳನನ್ನು ಹಿಡಿದ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ಆರೋಪ

Edited By:

Updated on: Nov 16, 2026 | 6:06 AM

ಮೈಸೂರಿನ ಜೆ.ಪಿ. ನಗರದಲ್ಲಿ ಚೈನ್ ಸ್ನಾಚಿಂಗ್ ಯತ್ನ ನಡೆದಿದ್ದು, ಆರೋಪಿಯನ್ನು ಹಿಡಿದ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದೆ. ಇದನ್ನು ವಿರೋಧಿಸಿ ಸಾರ್ವಜನಿಕರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಮೈಸೂರು, ನ.16: ಜೆ.ಪಿ. ನಗರದಲ್ಲಿ ಚೈನ್ ಸ್ನಾಚಿಂಗ್ ಯತ್ನ ಪ್ರಕರಣವೊಂದು ವರದಿಯಾಗಿದೆ. ಅನ್ಯ ಕೋಮಿನ ಯುವಕನೊಬ್ಬ ಯುವತಿಯ ಚೈನ್ ಕದಿಯಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಕಳ್ಳತನಕ್ಕೆ ಯತ್ನಿಸಿದ ಯುವಕನನ್ನು ಹಿಡಿದ ಪುನೀತ್ ಎಂಬ ಯುವಕನ ಮೇಲೆ, ಅನ್ಯ ಕೋಮಿನ ಯುವಕರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಪುನೀತ್ ಮತ್ತು ಸಾರ್ವಜನಿಕರು ಈ ಘಟನೆಯನ್ನು ಖಂಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಚೈನ್ ಕದಿಯಲು ಯತ್ನಿಸಿದ ಯುವಕನನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಅನ್ಯ ಕೋಮಿನ ಯುವಕರಿಂದ ನಡೆದ ಹಲ್ಲೆ ಆರೋಪದ ಬಗ್ಗೆ ಮಾಹಿತಿ ಪಡೆದರು. ಸ್ಥಳೀಯರಿಂದ ಘಟನೆಯ ವಿವರಗಳನ್ನು ಸಂಗ್ರಹಿಸಿದ ಪ್ರತಾಪ್ ಸಿಂಹ, ಘಟನಾ ಸ್ಥಳಕ್ಕೂ ಭೇಟಿ ನೀಡಿದರು. ಹಲ್ಲೆ ಮಾಡಿದವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More