AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 12, 2026 | 2:36 PM

Share

ಮುಖ್ಯಾಂಶಗಳು

  • ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
  • ಮೋಸ್ಟ್ ವಾಂಟೆಡ್ ಇಬ್ಬರು ಆರೋಪಿಗಳು NIA ಬಲೆಗೆ
  • 4 ವರ್ಷಗಳ ಬಳಿಕ ಆರೋಪಿಗಳು ಕೊನೆಗೂ ಖೆಡ್ಡಾಕ್ಕೆ

Praveen Nettar Case: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. 32 ವರ್ಷದ ನೌಷಾದ್ ಮತ್ತು 41 ವರ್ಷದ ಅಬ್ದುಲ್ ನಾಸಿರ್ ಬಂಧಿತ ಆರೋಪಿಗಳು. ಇವರಿಬ್ಬರ ಪತ್ತೆಗೆ ಎನ್​ಐಎ ತಲಾ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಆರೋಪಿಗಳು ಬೆಂಗಳೂರು ಮತ್ತು ಕೇರಳದಲ್ಲಿ ಅಡಗಿದ್ದರು ಎನ್ನಲಾಗಿದೆ.

ಮಂಗಳೂರು, ಜುಲೈ 12: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು 32 ವರ್ಷದ ನೌಷಾದ್ ಮತ್ತು 41 ವರ್ಷದ ಅಬ್ದುಲ್ ನಾಸಿರ್ ಎಂದು ಗುರುತಿಸಲಾಗಿದೆ. ನೌಷಾದ್ ಬೆಳ್ತಂಗಡಿಯ ಪದಂಗಡಿ ಪೋಯ್ಯಗುಡ್ಡೆಯ ನಿವಾಸಿಯಾಗಿದ್ದು, ಈತ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ. ಇನ್ನು ಮತ್ತೋರ್ವ ಅಬ್ದುಲ್ ನಾಸಿರ್ ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿದ್ದು, ಕೇರಳದ ಕೊಚ್ಚಿಯಲ್ಲಿ ಈತನನ್ನು ಬಂಧಿಸಲಾಗಿದೆ. ಈ ಇಬ್ಬರು ಪ್ರಮುಖ ಆರೋಪಿಗಳ ಪತ್ತೆಗಾಗಿ ಎನ್​ಐಎ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 12, 2026 02:29 PM

Follow Us