ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಪೂಜೆ!

Edited By:

Updated on: Nov 24, 2025 | 8:00 AM

ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಗೊಂದಲ ಹೆಚ್ಚುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಪೂಜೆ ಸಲ್ಲಿಸಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ದೇಗುಲದಲ್ಲಿ ಶಬರಿಮಲಾ ಯಾತ್ರಿಗಳು ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಪೂಜೆ ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ.

ಮೈಸೂರು, ನವೆಂಬರ್ 24: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗಿದ್ದು, ಡಿಕೆ ಶಿವಕುಮಾರ್ ಫೋಟೊ ಹಿಡಿದುಕೊಂಡು 20ಕ್ಕೂ ಹೆಚ್ಚು ಶಬರಿಮಲಾ ಯಾತ್ರಿಗಳು ‘‘ಡಿಕೆ ಶಿವಕುಮಾರ್ ಸಿಎಂ ಆಗಲಿ’’ ಎಂದು ಘೋಷಣೆ ಕೂಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ