‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಮತ್ತೊಮ್ಮೆ ಸ್ಪಷ್ಟನೆ ಕೊಟ್ಟ ಶ್ರೀರಾಮ್

Edited By:

Updated on: Nov 16, 2026 | 2:33 PM

ಪ್ರೇಮದ ಊರಲಿ ಚಿತ್ರದ 50 ದಿನಗಳ ಯಶಸ್ಸನ್ನು ಸಂಭ್ರಮಿಸುತ್ತಿರುವ ನಟ ಶ್ರೀರಾಮ್, ಕನ್ನಡ ನಟರ ಕುರಿತು ತಾವು ತಪ್ಪಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲ ದೊಡ್ಡ ನಟರು ತಮ್ಮ ಮನೆಯವರು ಇದ್ದಂತೆ ಎಂದ ಅವರು, ಅವರ ಸಾಧನೆಗಳಿಂದಲೇ ತಾವು ಕಲಿಯುತ್ತಿರುವುದಾಗಿ ತಿಳಿಸಿದ್ದಾರೆ. ಅಭಿಮಾನಿಗಳ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರೇಮದ ಊರಲಿ ಚಿತ್ರವು 50 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರತಂಡ ಸೆಲೆಬ್ರೇಷನ್ ಮಾಡಿದೆ. ಈ ಸಂದರ್ಭದಲ್ಲಿ ನಾಯಕ ನಟ ಶ್ರೀರಾಮ್, ಕನ್ನಡ ನಟರ ಕುರಿತು ತಾವು ನೀಡಿದ ಹೇಳಿಕೆಗಳ ಬಗ್ಗೆ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ಅದು ವಿವಾದ ಅನ್ನೋದು ತಪ್ಪು. ನಾನು ಆ ಸಂದರ್ಭದಲ್ಲಿ ನನ್ನ ಬಗ್ಗೆ ಮತ್ತು ನನ್ನ ಚಿತ್ರ ಪ್ರೇಮದ ಊರಲಿ ಬಗ್ಗೆ ಮಾತ್ರ ಮಾತನಾಡಿದ್ದೆ’ ಎಂದು ಶ್ರೀರಾಮ್ ಹೇಳಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಯೊಬ್ಬ ಸ್ಟಾರ್ ನಟರು ತಮ್ಮ ಸಿನಿಮಾಗೆ ಬೆಂಬಲ ನೀಡಿದ್ದಾರೆ ಎಂಬುದನ್ನು ಅವರು ಸ್ಮರಿಸಿದರು. ಜಗ್ಗೇಶ್, ಯಶ್, ರಿಷಬ್ ಶೆಟ್ಟಿ, ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಎಲ್ಲ ಸ್ಟಾರ್ ನಟರನ್ನು ಗೌರವದಿಂದ ಕಾಣೋದಾಗಿ ಹೇಳಿದ್ದಾರೆ.

‘ನಾನು ನಮ್ಮ ಮನೆಯವರ ಬಗ್ಗೆ ಯಾವತ್ತೂ ತಪ್ಪಾಗಿ ಮಾತನಾಡುವುದಕ್ಕೆ ಸಾಧ್ಯವೇ ಇಲ್ಲ. ಅವರಿಂದ ಕಲಿತು, ಅವರ ಹೆಜ್ಜೆಗಳನ್ನು ನೋಡಿ ಬೆಳೆಯುತ್ತಿರುವ ಹುಡುಗ ನಾನು’ ಎಂದು ಶ್ರೀರಾಮ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 16, 2026 02:21 PM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More