ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಕಿರುತೆರೆ ನಟಿ ರಮಿಕಾ ಶಿವು ಅವರು ‘ಪ್ರೇಮದ ಊರಲಿ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರನ್ನು ಕರ್ನಾಟಕದ ಕ್ರಶ್ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ಈಗ ಈ ಸಿನಿಮಾ 50 ದಿನಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.
ಕಿರುತೆರೆ ನಟಿ ರಮಿಕಾ ಶಿವು ಅವರು ‘ಪ್ರೇಮದ ಊರಲಿ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರನ್ನು ಕರ್ನಾಟಕದ ಕ್ರಶ್ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ಈಗ ಈ ಸಿನಿಮಾ 50 ದಿನಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಅವರು ಮಾಡಿದ ವಸಂತಾ ಎಂಬ ಪಾತ್ರ ಜನರಿಗೆ ಇಷ್ಟ ಆಗಿದೆ. ಕಿರುತೆರೆಯಲ್ಲಿ ಧಾರಾವಾಹಿ ಮಾಡುವಾಗಲೂ ಕೂಡ ರಮಿಕಾ ಶಿವು ಅವರಿಗೆ ಸಾಕಷ್ಟು ಸಿನಿಮಾ ಅವಕಾಶಗಳು ಬರುತ್ತಿದ್ದವು. ಆದರೆ ತಮ್ಮ ಮೊದಲ ಸಿನಿಮಾ ಇದೇ ರೀತಿ ಇರಬೇಕು ಎಂಬ ಕನಸು ರಮಿಕಾಗೆ ಇತ್ತು. ಹಾಗಾಗಿ ಅವರು ಸಾಕಷ್ಟು ಎಚ್ಚರಿಕೆಯಿಂದ ಪ್ರೇಮದ ಊರಲಿ ಚಿತ್ರವನ್ನು ಆಯ್ಕೆ ಮಾಡಿಕೊಂಡರು. ಈಗ ತಮ್ಮ ಮುಂದಿನ ಸಿನಿಮಾಗಳು ಕೂಡ ಅಷ್ಟೇ ಚೆನ್ನಾಗಿ ಇರಬೇಕು ಎಂಬ ಉದ್ದೇಶ ಅವರಿಗೆ ಇದೆ. ಹಾಗಾಗಿ ಗಡಿಬಿಡಿಯಲ್ಲಿ ಅವರು ಯಾವುದೇ ಸಿನಿಮಾವನ್ನು ಒಪ್ಪಿಕೊಳ್ಳುತ್ತಿಲ್ಲ. ಆ ಕುರಿತು ಅವರು ಮಾತನಾಡಿದ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ

