ಕಡಿಮೆ ಬಜೆಟ್ ಸಿನಿಮಾ, ಅದ್ಭುತ ಕಲೆಕ್ಷನ್: ‘ಪ್ರೇಮದ ಊರಲಿ’ ಬಗ್ಗೆ ಚಿತ್ರಮಂದಿರದವರ ಮಾತು
ಇತ್ತೀಚೆಗೆ ತೆರೆಕಂಡ ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್ಫುಲ್ ಆಗುತ್ತಿದೆ. ಇದರಿಂದ ಚಿತ್ರಮಂದಿರದವರು ಕೂಡ ಖುಷಿ ಆಗಿದ್ದಾರೆ. ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾದ ಈ ಸಿನಿಮಾ ಪ್ರತಿ ದಿನ ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ವಾರಾಂತ್ಯದಲ್ಲಿ ಕಲೆಕ್ಷನ್ ಇನ್ನೂ ಜಾಸ್ತಿ ಆಗುವ ಸಾಧ್ಯತೆ ಇದೆ.
ಇತ್ತೀಚೆಗೆ ತೆರೆಕಂಡ ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್ಫುಲ್ ಆಗುತ್ತಿದೆ. ಇದರಿಂದ ಚಿತ್ರಮಂದಿರದವರು ಕೂಡ ಖುಷಿ ಆಗಿದ್ದಾರೆ. ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾದ ಈ ಸಿನಿಮಾ ಪ್ರತಿ ದಿನ ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ವಾರಾಂತ್ಯದಲ್ಲಿ ಕಲೆಕ್ಷನ್ ಇನ್ನೂ ಜಾಸ್ತಿ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದ ಮ್ಯಾನೇಜರ್ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಮೊದಲ ಎರಡು ದಿನ ಹೆಚ್ಚು ಕಲೆಕ್ಷನ್ ಆಗಿರಲಿಲ್ಲ. ನಂತರ ಬಾಯಿಮಾತಿನ ಪ್ರಚಾರದಿಂದ ಉತ್ತಮ ಕಲೆಕ್ಷನ್ ಆಗುತ್ತಿದೆ. ಫ್ಯಾಮಿಲಿ ಆಡಿಯನ್ಸ್, ಮಹಿಳೆಯರು ಹೆಚ್ಚಾಗಿ ಸಿನಿಮಾ ನೋಡಲು ಬರುತ್ತಿದ್ದಾರೆ. ಜನರು ಇಂತಹ ಸಿನಿಮಾಗೆ ಪ್ರೋತ್ಸಾಹ ನೀಡಬೇಕು. ಪ್ರತಿದಿನ 5 ಶೋ ಆಗುತ್ತಿದೆ. ಸು ಫ್ರಂ ಸೋ ಚಿತ್ರದ ಬಳಿಕ ಇದೇ ಸಿನಿಮಾ ಇಷ್ಟು ಚೆನ್ನಾಗಿ ಪ್ರದರ್ಶನ ಕಾಣುತ್ತಿರುವುದು’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
