ಕನ್ನಡ, ತೆಲುಗು ಬಳಿಕ ಮಲಯಾಳಂ, ತಮಿಳು, ಹಿಂದಿಯಲ್ಲೂ ‘ಪ್ರೇಮದ ಊರಲಿ’ ಚಿತ್ರಕ್ಕೆ ಬೇಡಿಕೆ
‘ಪ್ರೇಮದ ಊರಲಿ’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್ಫುಲ್ ಆಗುತ್ತಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಈ ಚಿತ್ರವನ್ನು ಬೇರೆ ಭಾಷೆಯಲ್ಲೂ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇನ್ನುಳಿದ ಭಾಷೆಗಳಲ್ಲಿ ರಿಲೀಸ್ ಮಾಡುವ ಬಗ್ಗೆ ನಿರ್ದೇಶಕ ಮನೋಜ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಇತ್ತೀಚೆಗೆ ತೆರೆಕಂಡ ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್ಫುಲ್ ಆಗುತ್ತಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಈ ಸಿನಿಮಾವನ್ನು ಬೇರೆ ಭಾಷೆಯಲ್ಲೂ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇನ್ನುಳಿದ ಭಾಷೆಗಳಲ್ಲಿ ರಿಲೀಸ್ ಮಾಡುವ ಬಗ್ಗೆ ನಿರ್ದೇಶಕ ಮನೋಜ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಮಾಡಬೇಕು ಎಂದು ಆಫರ್ ಬರುತ್ತಿದೆ. ಅದರ ಮಾತುಕಥೆ ನಡೆಯುತ್ತಿದೆ’ ಎಂದು ನಿರ್ದೇಶಕರು ಹೇಳಿದ್ದಾರೆ. ‘ಜಯಣ್ಣ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕನ್ನಡ ವರ್ಷನ್ ಅನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡುತ್ತಾರೆ. ಉತ್ತರ ಭಾರತದಲ್ಲಿ ಅನಿಲ್ ತಡಾನಿ ಅವರು ಬಿಡುಗಡೆ ಮಾಡುತ್ತಿದ್ದಾರೆ. ವಿದೇಶದಲ್ಲಿ ಹೋಮ್ ಟೌನ್ ಎಂಟರ್‌ಟೈನ್‌ಮೆಂಟ್ ಮೂಲಕ ಕೆಆರ್‌ಜಿ ಅವರು ರಿಲೀಸ್ ಮಾಡಲಿದ್ದಾರೆ’ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

