ಕನ್ನಡ, ತೆಲುಗು ಬಳಿಕ ಮಲಯಾಳಂ, ತಮಿಳು, ಹಿಂದಿಯಲ್ಲೂ ‘ಪ್ರೇಮದ ಊರಲಿ’ ಚಿತ್ರಕ್ಕೆ ಬೇಡಿಕೆ

Updated on: Oct 04, 2026 | 8:09 AM

‘ಪ್ರೇಮದ ಊರಲಿ’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್​ಫುಲ್ ಆಗುತ್ತಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಈ ಚಿತ್ರವನ್ನು ಬೇರೆ ಭಾಷೆಯಲ್ಲೂ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇನ್ನುಳಿದ ಭಾಷೆಗಳಲ್ಲಿ ರಿಲೀಸ್ ಮಾಡುವ ಬಗ್ಗೆ ನಿರ್ದೇಶಕ ಮನೋಜ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಇತ್ತೀಚೆಗೆ ತೆರೆಕಂಡ ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್​ಫುಲ್ ಆಗುತ್ತಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಈ ಸಿನಿಮಾವನ್ನು ಬೇರೆ ಭಾಷೆಯಲ್ಲೂ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇನ್ನುಳಿದ ಭಾಷೆಗಳಲ್ಲಿ ರಿಲೀಸ್ ಮಾಡುವ ಬಗ್ಗೆ ನಿರ್ದೇಶಕ ಮನೋಜ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಮಾಡಬೇಕು ಎಂದು ಆಫರ್ ಬರುತ್ತಿದೆ. ಅದರ ಮಾತುಕಥೆ ನಡೆಯುತ್ತಿದೆ’ ಎಂದು ನಿರ್ದೇಶಕರು ಹೇಳಿದ್ದಾರೆ. ‘ಜಯಣ್ಣ ಮತ್ತು ಕೆಆರ್‌ಜಿ ಕನೆಕ್ಟ್ಸ್‌ ಜೊತೆಯಾಗಿ ಕನ್ನಡ ವರ್ಷನ್ ಅನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡುತ್ತಾರೆ. ಉತ್ತರ ಭಾರತದಲ್ಲಿ ಅನಿಲ್ ತಡಾನಿ ಅವರು ಬಿಡುಗಡೆ ಮಾಡುತ್ತಿದ್ದಾರೆ. ವಿದೇಶದಲ್ಲಿ ಹೋಮ್ ಟೌನ್ ಎಂಟರ್‌ಟೈನ್‌ಮೆಂಟ್ ಮೂಲಕ ಕೆಆರ್​ಜಿ ಅವರು ರಿಲೀಸ್ ಮಾಡಲಿದ್ದಾರೆ’ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More