‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಫುಲ್ ಖುಷ್

Edited By:

Updated on: Oct 22, 2026 | 10:28 PM

ಜನಮೆಚ್ಚಿದ ‘ಪ್ರೇಮದ ಊರಲಿ’ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆ ಕುರಿತು ನಿರ್ಮಾಪಕ ದೇವೇಂದ್ರ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಈಗ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ತ್ರಿಕೋನ ಪ್ರೇಮಕಥೆಯ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಖುಷಿಯ ಬಗ್ಗೆ ನಿರ್ಮಾಪಕ ದೇವೇಂದ್ರ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಮಲ್ಟಿಪ್ಲೆಕ್ಸ್​ನಲ್ಲಿ 500ಕ್ಕೂ ಹೆಚ್ಚು ಶೋಗಳಿವೆ. ಏಕಪರದೆ ಚಿತ್ರಮಂದಿರಗಳಲ್ಲಿ 900ಕ್ಕೂ ಹೆಚ್ಚು ಶೋಗಳು ನಡೆಯುತ್ತಿವೆ. ಜಯಣ್ಣ ಅವರು ಚೆನ್ನಾಗಿ ವಿತರಣೆ ಮಾಡಿಕೊಟ್ಟಿದ್ದಾರೆ. 100 ಕೋಟಿ ಕಲೆಕ್ಷನ್ ಎಂಬ ಸಂಖ್ಯೆಯ ಬಗ್ಗೆ ಲೆಕ್ಕ ಹಾಕಿಕೊಂಡು ಕೂರಲು ಆಗಲ್ಲ. ಅದೆಲ್ಲವೂ ನಡೆಯುತ್ತಿದೆ. ಕುಟುಂಬ ಸಮೇತರಾಗಿ ಜನರು ನೋಡುತ್ತಿದ್ದಾರೆ. ಇನ್ನೊಮ್ಮೆ ನಮಗೆ ಈ ಅವಕಾಶ ಸಿಗಲ್ಲ. ನಮ್ಮ ಎರಡನೇ ಸಿನಿಮಾ ಚೆನ್ನಾಗಿ ಆಗಬೇಕು. ಜನರ ನಂಬಿಕೆಯನ್ನು ನಾವು ಉಳಿಸಿಕೊಳ್ಳಬೇಕು. ಮುಂದಿನ ಸಿನಿಮಾ ಹೇಗೆ ಮಾಡಬೇಕು ಎಂಬುದು ನಮ್ಮ ತಲೆಯಲ್ಲಿ ಓಡುತ್ತಿದೆ’ ಎಂದು ದೇವೇಂದ್ರ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More