ಹಾಸನ, ಅಕ್ಟೋಬರ್ 24: ಈ ವರ್ಷದ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ. ಹಾಸನಾಂಬ ದರ್ಶನಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ದಸರಾ ಮಾದರಿಯ ಲೈಟಿಂಗ್ಸ್, ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್, ಭಕ್ತರಿಗೆ ವಿಶೇಷ ದರ್ಶನ ಅವಕಾಶ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದೆ. ಸಿದ್ಧತೆ ಸಂಬಂಧಿಸಿದ ವಿಡಿಯೋ ಇಲ್ಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ