AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗರ್ವನರ್‌!

ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗರ್ವನರ್‌!

ಹರೀಶ್ ಜಿ.ಆರ್​.
| Edited By: |

Updated on:May 06, 2026 | 7:08 PM

Share

ತಮಿಳುನಾಡು ವಿಧಾನಸಭೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದರು. ಇನ್ನು ನಾಳೆಯೇ (ಮೇ 07) ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ನೆಹರು ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಚೆನ್ನೈ, (ಮೇ 06): ತಮಿಳುನಾಡು (Tamil Nadu) ವಿಧಾನಸಭೆಯಲ್ಲಿ ದಳಪತಿ ವಿಜಯ್ (Vijay) ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದರು. ಇನ್ನೊಂದೆಡೆ ನಾಳೆಯೇ (ಮೇ 07) ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಸಕಲ ಸಿದ್ಧತೆಗಳನ್ನ ಕೈಗೊಂಡಿದ್ದರು. ಇದಕ್ಕೆ ನೆಹರು ಕ್ರೀಡಾಂಗಣದಲ್ಲಿ (Jawaharlal Nehru Stadium) ಭರ್ಜರಿ ಸಿದ್ಧತೆಗಳು ನಡೆದಿವೆ.

ಆದ್ರೆ, ವಿಜಯ್ ನೀಡಿರುವ ನಂಬರ್ (ಬಹುಮತಕ್ಕೆ ಬೇಕಾದ ಸಂಖ್ಯೆ)​​ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತೃಪ್ತರಾಗಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅನುಮತಿ ಕೊಟ್ಟಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆ ವಿಜಯ್ ಪ್ರಮಾಣ ವಚನ ಕನಸು ನುಚ್ಚು ನೂರಾಗಿದೆ.

ಇದನ್ನೂ ಓದಿ: ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್

Published on: May 06, 2026 06:43 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More