ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕ್ಷಣಗಣನೆ: ಸಿದ್ಧತೆ ಹೇಗಿದೆ?
ಭಾರಿ ವಿವಾದದ ಬಳಿಕ ಆರ್ಎಸ್ಎಸ್ ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 3.30 ರಿಂದ 5.15ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ.
ಕಲಬುರಗಿ, ನವೆಂಬರ್ 16: ಚಿತ್ತಾಪುರದಲ್ಲಿ ಬಹು ನಿರೀಕ್ಷಿತ ಆರ್ಎಸ್ಎಸ್ ಪಥಸಂಚಲನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ಕಾನೂನು ಸಮರದ ಬಳಿಕ ಇಂದು ಪಥಸಂಚಲನ ನಡೆಯಲಿದೆ. ಈ ಹಿನ್ನಲೆ ಆರ್ಎಸ್ಎಸ್ ಸಂಘಟನೆಯಿಂದ ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಜಿಲ್ಲಾಡಳಿತದ ಮಾಹಿತಿಯ ಪ್ರಕಾರ, 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಈ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನವನ್ನು ನಡೆಯಲಿದ್ದು, ಇದು ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಕೆನರಾ ಬ್ಯಾಂಕ್ ಸರ್ಕಲ್ ಮತ್ತು ಎಪಿಎಂಸಿ ಮಾರ್ಗವಾಗಿ ಸಾಗಿ, ಮತ್ತೆ ಬಜಾಜ್ ಕಲ್ಯಾಣ ಮಂಟಪದಲ್ಲೇ ಕೊನೆಗೊಳ್ಳಲಿದೆ. ಸಂಜೆ 5:15 ರವರೆಗೆ ನಡೆಯಲಿರುವ ಈ ಪಥಸಂಚಲನದ ನಂತರ ವೇದಿಕೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



