ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕ್ಷಣಗಣನೆ: ಸಿದ್ಧತೆ ಹೇಗಿದೆ?

ಭಾರಿ ವಿವಾದದ ಬಳಿಕ ಆರ್​ಎಸ್​ಎಸ್ ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 3.30 ರಿಂದ 5.15ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ.

ಕಲಬುರಗಿ, ನವೆಂಬರ್​ 16: ಚಿತ್ತಾಪುರದಲ್ಲಿ ಬಹು ನಿರೀಕ್ಷಿತ ಆರ್​ಎಸ್​ಎಸ್ ಪಥಸಂಚಲನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ಕಾನೂನು ಸಮರದ ಬಳಿಕ ಇಂದು ಪಥಸಂಚಲನ ನಡೆಯಲಿದೆ. ಈ ಹಿನ್ನಲೆ ಆರ್​ಎಸ್​ಎಸ್ ಸಂಘಟನೆಯಿಂದ ಚಿತ್ತಾಪುರದ ಬಜಾಜ್​ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಜಿಲ್ಲಾಡಳಿತದ ಮಾಹಿತಿಯ ಪ್ರಕಾರ, 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಈ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನವನ್ನು ನಡೆಯಲಿದ್ದು, ಇದು ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಕೆನರಾ ಬ್ಯಾಂಕ್ ಸರ್ಕಲ್ ಮತ್ತು ಎಪಿಎಂಸಿ ಮಾರ್ಗವಾಗಿ ಸಾಗಿ, ಮತ್ತೆ ಬಜಾಜ್ ಕಲ್ಯಾಣ ಮಂಟಪದಲ್ಲೇ ಕೊನೆಗೊಳ್ಳಲಿದೆ. ಸಂಜೆ 5:15 ರವರೆಗೆ ನಡೆಯಲಿರುವ ಈ ಪಥಸಂಚಲನದ ನಂತರ ವೇದಿಕೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us