ದೆಹಲಿ ವಿಧಾನಸಭಾ ಚುನಾವಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮತದಾನ

ದೆಹಲಿ ವಿಧಾನಸಭಾ ಚುನಾವಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮತದಾನ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 05, 2025 | 11:38 AM

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್, ಜೆಪಿ ನಡ್ಡಾ ನೇತೃತ್ವದ ಬಿಜೆಪಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಪಕ್ಷಗಳ ನಡುವೆ ತ್ರಿಕೋನೀಯ ಸ್ಪರ್ಧೆ ದೆಹಲಿ ವಿಧಾನಸಭೆಗೆ ನಡೆಯುತ್ತಿದೆ. ದೆಹಲಿಯ ಮುಖ್ಯಮಂತ್ರಿ ಅತಿಶಿ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಹ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ದೆಹಲಿ: ದೆಹಲಿ ವಿಧಾನ ಸಭಾ ಚುನಾವಣೆಗಾಗಿ ಇಂದು ಬೆಳಗ್ಗೆ ಏಳು ಗಂಟೆಯಿಂದ ಮತದಾನ ಶುರುವಾಗಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರೆಸಿಡೆಂಟ್ಸ್ ಎಸ್ಟೇಟ್ ನಲ್ಲಿರುವ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯ ಮತಗಟ್ಟೆಗೆ ತಮ್ಮ ಹಕ್ಕನ್ನು ಚಲಾಯಿಸಿದರು. ಅವರು ಮತ ಚಲಾಯಿಸುವ ನಿಮಿತ್ತ ಮತಗಟ್ಟೆಯ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ದೆಹಲಿಯ ಲೆಫ್ಟಿನಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ರಾಜ್ ನಿವಾಸ್ ಮಾರ್ಗ್ ನಲ್ಲಿರುವ ಸೆಂಟ್ ಜೇವಿಯರ್ ಮತಗಟ್ಟೆಗೆ ತೆರಳಿ ವೋಟ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Delhi Assembly Election 2025: ಇಂದು ದೆಹಲಿ ವಿಧಾನಸಭಾ ಚುನಾವಣೆ, ಎಲ್ಲಾ 70 ಕ್ಷೇತ್ರಗಳಿಗೆ ಮತದಾನ, ತ್ರಿಕೋನ ಸ್ಪರ್ಧೆ