ಇರುಮುಡಿ ಹೊತ್ತು, 18 ಪಡಿ ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನಕ್ಕೆ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Updated on: Oct 22, 2025 | 4:45 PM

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದು ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡಿದ ಐತಿಹಾಸಿಕ ಕ್ಷಣವಾಗಿದೆ. ಇದೇ ಮೊದಲು ಒಬ್ಬ ರಾಷ್ಟ್ರಪತಿಯೊಬ್ಬರು ಹೀಗೆ ಭೇಟಿ ನೀಡಿರುವುದು. ಅಯ್ಯಪ್ಪನಿಗೆ ಪ್ರಾರ್ಥನೆ ಸಲ್ಲಿಸಿ, ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು.

ಶಬರಿಮಲೆ, ಅ.22: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu)  ಅವರು ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯು ಭಾರತ ರಾಷ್ಟ್ರಪತಿ ಇತಿಹಾಸದಲ್ಲೇ ಮೊದಲ ಭೇಟಿಯಾಗಿದೆ. ಇದೊಂದು ಐತಿಹಾಸಿಕ ಭೇಟಿಯಾಗಿದೆ. ರಾಷ್ಟ್ರಪತಿ ಮುರ್ಮು ಅವರು ಅಯ್ಯಪ್ಪನಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು. ಈ ಭೇಟಿಯ ಸಂದರ್ಭದಲ್ಲಿ, ಅವರು ದೇಗುಲದ ಸಂಪ್ರದಾಯಗಳಿಗೆ ಅನುಗುಣವಾಗಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಶಬರಿಮಲೆ ದೇವಾಲಯವು ಹಿಂದೂಗಳ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇದೀಗ ರಾಷ್ಟ್ರಪತಿಗಳ ಈ ಭೇಟಿಯು ವ್ಯಾಪಕ ಗಮನ ಸೆಳೆದಿದೆ. ಇದರ ಇನ್ನು ವಿಶೇಷವಾಗಿದ್ದು ಇರುಮುಡಿ ಹೊತ್ತು 18 ಪಡಿ ಮೆಟ್ಟಿಲು ಹತ್ತಿಕೊಂಡು ಬಂದು ದೇವರ ದರ್ಶನ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ