ತಿರುಪತಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಇಲ್ಲಿಗೆ ಸಮೀಪದ ತಿರುಮಲ ಬೆಟ್ಟದ ಮೇಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿಗಳು ಗುರುವಾರ ತಿರುಪತಿ ತಲುಪಿದ್ದರು. ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮವಾರಿ ದೇವಸ್ಥಾನದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು. ಅವರು ಇಂದು ಬೆಳಿಗ್ಗೆ ಪದ್ಮಾವತಿ ಅತಿಥಿ ಗೃಹದಿಂದ ಹೊರಟು ಶ್ರೀ ಭೂ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿಂದ ಅವರು ತಿರುಮಲ ತಿರುಪತಿ ದೇವಸ್ಥಾನವನ್ನು ತಲುಪಿದರು. ಅಲ್ಲಿ ಅವರನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು, ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮತ್ತು ಇತರ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ತಿರುಪತಿಯ ದೇವಾಲಯದಲ್ಲಿರುವ 'ಧ್ವಜಸ್ಥಂಭ'ದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ದೇವರ ದರ್ಶನ ಪಡೆದರು.
ತಿರುಮಲ, ನವೆಂಬರ್ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು ಆಂಧ್ರ ಪ್ರದೇಶದ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರು ಇಂದು ಬೆಳಿಗ್ಗೆ ಪದ್ಮಾವತಿ ಅತಿಥಿ ಗೃಹದಿಂದ ಹೊರಟು ಶ್ರೀ ಭೂ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿಂದ ಅವರು ತಿರುಮಲ ತಿರುಪತಿ ದೇವಸ್ಥಾನವನ್ನು ತಲುಪಿದರು. ಅಲ್ಲಿ ಅವರನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು, ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮತ್ತು ಇತರ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ತಿರುಪತಿಯ ದೇವಾಲಯದಲ್ಲಿರುವ ‘ಧ್ವಜಸ್ಥಂಭ’ಕ್ಕೆ ಪ್ರಾರ್ಥನೆ ಸಲ್ಲಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ದೇವರ ದರ್ಶನ ಪಡೆದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ