ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರ ಭೇಟಿಗಾಗಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನವನ್ನು ಹೂವಿನಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಅವರು ಪ್ರಸಿದ್ಧ ಜ್ಯೋತಿರ್ಲಿಂಗ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
|

Updated on: Sep 19, 2024 | 5:43 PM

ಉಜ್ಜಯಿನಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮತ್ತು ಬಾಬಾ ಮಹಾಕಾಲ್‌ಗೆ ಅಭಿಷೇಕ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಮಂಗು ಭಾಯಿ ಪಟೇಲ್ ಮತ್ತು ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಉಪಸ್ಥಿತರಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಉಜ್ಜಯಿನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜೆ ಹಾಗೂ ಅಭಿಷೇಕ ನೆರವೇರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us