ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆದಿಶಕ್ತಿ ದ್ರೌಪದಿದೇವಿ ಮೇಲೆ ಅಪಾರ ಭಕ್ತಿ ಇದೆ. ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ಅವರಿಗೆ ಸಮರ್ಪಿಸಲಾಯಿತು. ಈ ವೇಳೆ ರಾಷ್ಟ್ರಪತಿಯವರು ದ್ರೌಪದಿ ದೇವಿಯ ದರ್ಶನಕ್ಕೆ ಬರುವುದಾಗಿ ಹಾಗೂ ಕರಗಕ್ಕೆ ಶುಭಕೋರುವುದಾಗಿ ಭರವಸೆ ನೀಡಿದರು. ಮುಂಬರುವ ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಶುಭ ಹಾರೈಸುವುದಾಗಿ ತಿಳಿಸಿದರು.
ಬೆಂಗಳೂರು, ಏಪ್ರಿಲ್ 01: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ಇಂದು ನಡೆಯಲಿದೆ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಮಾತನಾಡಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿದೆ. ನಾನೇ ಅಧ್ಯಕ್ಷ ಎಂದು ಹೇಳಿದೆ. ದೇವಸ್ಥಾನದ ಮಹಿಮೆ ಹೇಳಿದೆ. ಒಂದು ದಿನ ದೇವಸ್ಥಾನಕ್ಕೆ ಬರುತ್ತೇನೆ, ಜನರಿಗೆ ನನ್ನ ಶುಭಹಾರೈಕೆ ತಿಳಿಸಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
