ಹೊಸ ರಾಷ್ಟ್ರಪತಿ ಆಯ್ಕೆಗೆ ಮತ ಚಲಾಯಿಸಲು  ಯಡಿಯೂರಪ್ಪ ನೇತೃತ್ವದ  ಬಿಜೆಪಿ ನಾಯಕರು ಬಸ್ಸಲ್ಲಿ ಬಂದರು

ಹೊಸ ರಾಷ್ಟ್ರಪತಿ ಆಯ್ಕೆಗೆ ಮತ ಚಲಾಯಿಸಲು  ಯಡಿಯೂರಪ್ಪ ನೇತೃತ್ವದ  ಬಿಜೆಪಿ ನಾಯಕರು ಬಸ್ಸಲ್ಲಿ ಬಂದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 18, 2022 | 12:23 PM

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉಳಿದ ನಾಯಕರು ಬಸ್ಸು ಹತ್ತುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.

ಬೆಂಗಳೂರು: ಹೊಸ ರಾಷ್ಟ್ರಪತಿಯ ಆಯ್ಕೆಗೆ ಬೆಂಗಳೂರಿನ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದೆ. ರೆಸಾರ್ಟ್ (resort) ಒಂದರಲ್ಲಿ ತಂಗಿದ್ದ ಬಿಜೆಪಿ ನಾಯಕರು- ಮುಖ್ಯಮಂತ್ರಿಗಳು, ಸಚಿವರು ಮತ್ತು ಶಾಸಕರು ಬಸ್ಸಿನಲ್ಲಿ ವಿಧಾನ ಸೌದಕ್ಕೆ ಆಗಮಿಸಿದರು. ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನೇತೃತ್ವದಲ್ಲಿ ಉಳಿದ ನಾಯಕರು ಬಸ್ಸು ಹತ್ತುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.