AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಫೈಟರ್ ಪ್ಲೇಟ್ ಸೂಟ್ ಧರಿಸಿ ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

Video: ಫೈಟರ್ ಪ್ಲೇಟ್ ಸೂಟ್ ಧರಿಸಿ ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

ನಯನಾ ರಾಜೀವ್
|

Updated on:Oct 29, 2025 | 11:37 AM

Share

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು. 2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು.

ಅಂಬಾಲಾ, ಅಕ್ಟೋಬರ್ 29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.

2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್‌ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 29, 2025 11:36 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More