Video: ಫೈಟರ್ ಪ್ಲೇಟ್ ಸೂಟ್ ಧರಿಸಿ ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

Updated on: Oct 29, 2025 | 11:37 AM

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು. 2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು.

ಅಂಬಾಲಾ, ಅಕ್ಟೋಬರ್ 29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.

2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್‌ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 29, 2025 11:36 AM