Video: ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಗೌರವಾನ್ವಿತ ರಾಷ್ಟ್ರಪತಿಯವರಿಂದ ಗಣ್ಯ ಅತಿಥಿಗಳಿಗೆ ಕಳುಹಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆಯ ಆಹ್ವಾನ ಪತ್ರಿಕೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಜಾನಪದ ಕಲಾ ಪರಂಪರೆಗಳಿಂದ ಸ್ಫೂರ್ತಿ ಪಡೆದ ವಿನ್ಯಾಸವು ಸಮುದಾಯ, ಸೃಜನಶೀಲತೆ ಮತ್ತು ಸಂರಕ್ಷಣೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಈ ಆಹ್ವಾನ ಪತ್ರವು ಸ್ವಾತಂತ್ರ್ಯ ದಿನದ ಸಂಭ್ರಮದೊಂದಿಗೆ ಭಾರತದ ಪರಂಪರೆ ಮತ್ತು ಕಲಾತ್ಮಕ ಶ್ರೀಮಂತಿಕೆಯನ್ನು ಎತ್ತಿಹಿಡಿಯುವ ಪ್ರಯತ್ನವಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಗೌರವಾನ್ವಿತ ರಾಷ್ಟ್ರಪತಿಯವರಿಂದ ಗಣ್ಯ ಅತಿಥಿಗಳಿಗೆ ಕಳುಹಿಸಲಾಗಿರುವ ಆಹ್ವಾನ ಪತ್ರಿಕೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಕಲಾತ್ಮಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಈ ವರ್ಷದ ಆಹ್ವಾನ ಪತ್ರಿಕೆಯ ವಿನ್ಯಾಸವು ಸಮುದಾಯ, ಸೃಜನಶೀಲತೆ ಮತ್ತು ಸಂರಕ್ಷಣೆ ನಡುವಿನ ಪರಸ್ಪರ ಅವಲಂಬನೆಯನ್ನು ಪ್ರತಿಬಿಂಬಿಸುವಂತಿದ್ದು, ಭಾರತದ ವಿವಿಧ ಪ್ರದೇಶಗಳ ವಿಶಿಷ್ಟ ಕಲಾ ಪರಂಪರೆಗಳಿಗೆ ವಿಶೇಷ ಸ್ಥಾನ ನೀಡಲಾಗಿದೆ. ವಿಶೇಷವಾಗಿ ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೀವಂತ, ವರ್ಣರಂಜಿತ ಹಾಗೂ ವೈವಿಧ್ಯಮಯ ಜನಪದ ಕಲಾ ಪರಂಪರೆಗಳಿಂದ ಈ ವರ್ಷದ ಆಹ್ವಾನ ಪತ್ರಿಕೆ ಮತ್ತು ಔತಣಕೂಟದ ಮುಖ್ಯ ಪರಿಕಲ್ಪನೆಗೆ ಸ್ಫೂರ್ತಿ ಪಡೆಯಲಾಗಿದೆ. ಈ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದೊಂದಿಗೆ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ, ಪರಂಪರೆ ಮತ್ತು ಸೃಜನಶೀಲತೆಯನ್ನೂ ಪ್ರತಿಬಿಂಬಿಸುವ ಪ್ರಯತ್ನ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

