ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಬಿಜೆಪಿ, ಜೆಡಿಎಸ್-ಎರಡೂ ಪಕ್ಷಗಳ ಮೇಲೆ ಒತ್ತಡ: ಡಾ ಸಿಎನ್ ಅಶ್ವಥ್ ನಾರಾಯಣ
ಯೋಗೇಶ್ವರ್ ಬಿಜೆಪಿಯ ಹಿರಿಯ ನಾಯಕರು, ಹಾಗಾಗಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವುದನ್ನು ಅವರು ಇಷ್ಟಪಡುತ್ತಾರೆ, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದು ಅವರಿಗೆ ಬೇಕಿಲ್ಲ, ತನ್ನ ವೈಯಕ್ತಿಕ ಅಭಿಪ್ರಾಯ ಕೇಳೋದಾದರೆ ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ನಂತರ ಯೋಗೇಶ್ವರ್ ಅವರೇ ಸೂಕ್ತ ಅಭ್ಯರ್ಥಿ ಎಂದು ಅಶ್ವಥ್ ಹೇಳಿದರು.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ಯಾರೆನ್ನುವುದು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪಟ್ಟು ಸಡಲಿಸುತ್ತಿಲ್ಲ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ, ಎರಡೂ ಪಕ್ಷಗಳ ಮೇಲೆ ಒತ್ತಡ ಇರೋದನ್ನು ಅಂಗೀಕರಿಸಿದರು. ಕುಮಾರಸ್ವಾಮಿ ತಮ್ಮ ಪಕ್ಷದ ಹಿತ ಕಾಪಾಡಲು ಪ್ರಯತ್ನಿಸುತ್ತಿದ್ದರೆ ಬಿಜೆಪಿ ತನ್ನ ಅಭ್ಯರ್ಥಿ ಸ್ಪರ್ಧಿಸಲಿ ಅಂತ ತವಕಿಸುತ್ತಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್: ಜೆಡಿಎಸ್ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್ಗೆ ಹೆಚ್ಡಿಕೆ ಆಫರ್
Latest Videos