ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಬಿಜೆಪಿ, ಜೆಡಿಎಸ್-ಎರಡೂ ಪಕ್ಷಗಳ ಮೇಲೆ ಒತ್ತಡ: ಡಾ ಸಿಎನ್ ಅಶ್ವಥ್ ನಾರಾಯಣ

ಅರುಣ್​ ಕುಮಾರ್​ ಬೆಳ್ಳಿ

Updated on: Oct 21, 2024 | 4:38 PM

ಯೋಗೇಶ್ವರ್ ಬಿಜೆಪಿಯ ಹಿರಿಯ ನಾಯಕರು, ಹಾಗಾಗಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವುದನ್ನು ಅವರು ಇಷ್ಟಪಡುತ್ತಾರೆ, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದು ಅವರಿಗೆ ಬೇಕಿಲ್ಲ, ತನ್ನ ವೈಯಕ್ತಿಕ ಅಭಿಪ್ರಾಯ ಕೇಳೋದಾದರೆ ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ನಂತರ ಯೋಗೇಶ್ವರ್ ಅವರೇ ಸೂಕ್ತ ಅಭ್ಯರ್ಥಿ ಎಂದು ಅಶ್ವಥ್ ಹೇಳಿದರು.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್​ಡಿಎ ಅಭ್ಯರ್ಥಿ ಯಾರೆನ್ನುವುದು ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪಟ್ಟು ಸಡಲಿಸುತ್ತಿಲ್ಲ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ, ಎರಡೂ ಪಕ್ಷಗಳ ಮೇಲೆ ಒತ್ತಡ ಇರೋದನ್ನು ಅಂಗೀಕರಿಸಿದರು. ಕುಮಾರಸ್ವಾಮಿ ತಮ್ಮ ಪಕ್ಷದ ಹಿತ ಕಾಪಾಡಲು ಪ್ರಯತ್ನಿಸುತ್ತಿದ್ದರೆ ಬಿಜೆಪಿ ತನ್ನ ಅಭ್ಯರ್ಥಿ ಸ್ಪರ್ಧಿಸಲಿ ಅಂತ ತವಕಿಸುತ್ತಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಬೈ ಎಲೆಕ್ಷನ್: ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಹೆಚ್​​ಡಿಕೆ ಆಫರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.