AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು-ಮೊಸರು ಗಿಫ್ಟ್ ನೀಡಿ ವಿನೂತನ ಜಾಗೃತಿ ಅಭಿಯಾನ

ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು-ಮೊಸರು ಗಿಫ್ಟ್ ನೀಡಿ ವಿನೂತನ ಜಾಗೃತಿ ಅಭಿಯಾನ

ರಾಮ್​, ಮೈಸೂರು
| Edited By: |

Updated on: Nov 02, 2026 | 2:42 PM

Share

ಬರಗಾಲದ ಹಿನ್ನೆಲೆಯಲ್ಲಿ ಈಗಾಗಲೇ ಅಕ್ಕಿ, ಜೋಳ ಸೇರಿದಂತೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಹಾಲು ಮತ್ತು ಮೊಸರಿನ ದರ ಹೆಚ್ಚಳ ಮಾಡಿದೆ. ಇದರಿಂದ ಬಡ ಹಾಗೂ ಮಾಧ್ಯಮ ವರ್ಗದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಈ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇನ್ನು ಈ ಬೆಲೆ ಏರಿಕೆ ಸಂಬಂಧ ಪ್ರಜ್ಞಾವಂತ ನಾಗರಿಕ ವೇದಿಕೆ, ನವ ದಂಪತಿಗಳಿಗೆ ಹಾಲು ಮೊಸರನ್ನೇ ಉಡುಗೊರೆಯಾಗಿ ಗಮನಸೆಳೆದಿದೆ.

ಮೈಸೂರು, (ನವೆಂಬರ್ 02): ಬರಗಾಲದ ಹಿನ್ನೆಲೆಯಲ್ಲಿ ಈಗಾಗಲೇ ಅಕ್ಕಿ, ಜೋಳ ಸೇರಿದಂತೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಹಾಲು ಮತ್ತು ಮೊಸರಿನ ದರ ಹೆಚ್ಚಳ ಮಾಡಿದೆ. ಇದರಿಂದ ಬಡ ಹಾಗೂ ಮಾಧ್ಯಮ ವರ್ಗದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಈ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇನ್ನು ಈ ಬೆಲೆ ಏರಿಕೆ ಸಂಬಂಧ ಪ್ರಜ್ಞಾವಂತ ನಾಗರಿಕ ವೇದಿಕೆ, ನವ ದಂಪತಿಗಳಿಗೆ ಹಾಲು ಮೊಸರನ್ನೇ ಉಡುಗೊರೆಯಾಗಿ ಗಮನಸೆಳೆದಿದೆ.

ಹೌದು…ಅಚ್ಚರಿ ಅನ್ನಿಸಿದರೂ ಸತ್ಯ. ಮೈಸೂರಿನ ಕಡಕೋಳದ ಶ್ರೀ ಕಾಳಿಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಮಂಜು-ಅನನ್ಯ ವಿವಾಹ ನಡೆದಿದ್ದು, ಈ ವೇಳೆ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್ , ಹಾಲು ಹಾಗೂ ಮೊಸರಿನ ಪಾಕೆಟ್ ಉಡುಗೊರೆಯಾಗಿ ನೀಡಿ ವಿಭಿನ್ನ ಜಾಗೃತಿ ಮೂಡಿಸುತ್ತಿದೆ. ಹಾಲು–ಮೊಸರು ಪ್ರತಿಯೊಂದು ಕುಟುಂಬದ ನಿತ್ಯದ ಅಗತ್ಯ ವಸ್ತು. ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆಯಾಗಿದೆ. ಜನ ಸಾಮಾನ್ಯರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಕೋಳ ಜಗದೀಶ್ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More