ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

Edited By:

Updated on: Apr 09, 2025 | 7:34 PM

ಕರ್ನಾಟಕದಲ್ಲಿ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ, ಏಪ್ರಿಲ್ 09): ಕರ್ನಾಟಕದಲ್ಲಿ ಬೆಲೆ ಏರಿಕೆ (Price Hike)  ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ (guarantee schemes) ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ.

ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ. ಇನ್ನು ಕೇಂದ್ರ ಸರ್ಕಾರ ಎಲ್.ಪಿ.ಜಿ ಅಡುಗೆ ಸಿಲಿಂಡರ್ ಬೆಲೆ ಏರಿಕೆ ಮಾಡಿಲ್ವಾ? ಅವರು ಯಾವುದೇ ಗ್ಯಾರಂಟಿ ಕೊಡದೇ ಬೆಲೆ ಏರಿಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More