ಮನ್ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ
‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ ಮಾಡಿದರು ಎಂದು ತಿಳಿಸಿದ್ದಾರೆ. ಇನ್ನು ಮನ್ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ನವದೆಹಲಿ, (ಡಿಸೆಂಬರ್ 28): ಮನ್ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ ಮಾಡಿದರು ಎಂದು ತಿಳಿಸಿದ್ದಾರೆ. ಇನ್ನು ಮನ್ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

