ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ಅರ್ಚಕರ ಸಂಕಲ್ಪ, ಅದರಲ್ಲಿ ತಪ್ಪೇನಿಲ್ಲವೆಂದ ಡಿಕೆ ಶಿವಕುಮಾರ್

ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ಅರ್ಚಕರ ಸಂಕಲ್ಪ, ಅದರಲ್ಲಿ ತಪ್ಪೇನಿಲ್ಲವೆಂದ ಡಿಕೆ ಶಿವಕುಮಾರ್

ಸೂರಜ್​, ಮಹಾವೀರ್​ ಉತ್ತರೆ
| Updated By: ಆಯೇಷಾ ಬಾನು

Updated on:Mar 27, 2024 | 12:05 PM

ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ‌‌. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಡಿ‌.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

ಕಾರವಾರ, ಮಾರ್ಚ್​.27: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ಟೆಂಪಲ್ ರನ್ ಶುರು ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ಈಗ ಗೋಕರ್ಣಕ್ಕೆ (Gokarna) ಆಗಮಿಸಿದ್ದಾರೆ. ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ‌‌. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಡಿ‌.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಗೋಕರ್ಣ ಆತ್ಮಲಿಂಗ ಪೂಜೆ ವೇಳೆ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಅರ್ಚಕರು ಸಂಕಲ್ಪ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Mar 27, 2024 11:14 AM