ಸಿದ್ದರಾಮಯ್ಯ, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದ ಪುರೋಹಿತರು; ವಿಡಿಯೋ ಇಲ್ಲಿದೆ
ನಮಾಜ್ ಮಾಡಿದ ಬಳಿಕ ಸಿದ್ದರಾಮಯ್ಯ ಚಾಮರಾಜಪೇಟೆ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು.
ಇಂದು ದೇಶದಾದ್ಯಂತ ಮುಸ್ಲಿಂ (Muslim) ಬಾಂಧವರು ಬಕ್ರೀದ್ (Bakrid) ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ನಮಾಜ್ ಮಾಡಿದ ಬಳಿಕ ಸಿದ್ದರಾಮಯ್ಯ ಚಾಮರಾಜಪೇಟೆ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಖಾನ್, ಪುತ್ರ ಸಾಥ್ ನೀಡಿದರು. ಇನ್ನು ದೇವರ ಪೂಜೆಯಲ್ಲಿ ಭಾಗಿಯಾಗಿದ್ದ ಸಿದ್ದು, ಜಮೀರ್ಗೆ ಪುರೋಹಿತರು ಹಣೆಗೆ ಕೇಸರಿ ಬೊಟ್ಟು ಹಚ್ಚಿದರು.
ಇದನ್ನೂ ಓದಿ: ಕಲ್ಲಿನ ಪುಡಿಗಿಂತ ಅಕ್ಕಿ ಹಿಟ್ಟಿನಲ್ಲಿ ರಂಗೋಲಿ ಬಿಡಿಸಿದರೆ ಹೇಗೆ? ಇದರಿಂದ ಆಗುವ ಪ್ರಯೋಜನಗಳು ಇಲ್ಲಿವೆ
Published on: Jul 10, 2022 12:29 PM