Video: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ

Updated on: May 10, 2026 | 12:55 PM

ತಮಿಳುನಾಡು ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿ, ಜನರ ಜೀವನ ಸುಧಾರಿಸಲು ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರದೊಂದಿಗೆ ಕೆಲಸ ಮುಂದುವರಿಸಲಿದೆ ಎಂದು ಹೇಳಿದ್ದಾರೆ. ನೂತನ ಸಿಎಂ ವಿಜಯ್ ಮೇ 13ರಂದು ವಿಶ್ವಾಸಮತ ಯಾಚಿಸಲಿದ್ದು, ಒಟ್ಟು 120 ಶಾಸಕರ ಬೆಂಬಲ ಹೊಂದಿದ್ದಾರೆ.

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಯವರು ತಮ್ಮ ಎಕ್ಸ್ ಖಾತೆಯಲ್ಲಿ, ವಿಜಯ್ ಅವರ ಮುಂದಿನ ಅಧಿಕಾರವಧಿಗೆ ಶುಭ ಕೋರಿದ್ದಾರೆ. ವಿಜಯ್ ಅವರ ಮುಂದಿನ ಅಧಿಕಾರವಧಿಗೆ ಶುಭ ಕೋರಿರುವ ಮೋದಿ, ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಗಾಗಿ ಒಟ್ಟಾಗಿ ಶ್ರಮಿಸುವ ಸಂಕಲ್ಪವನ್ನು ಅವರು ಒತ್ತಿ ಹೇಳಿದ್ದಾರೆ.

ಚುನಾವಣಾ ಫಲಿತಾಂಶಗಳು ಪ್ರಕಟವಾದಾಗಲೂ ಪ್ರಧಾನಿ ನರೇಂದ್ರ ಮೋದಿ ಅವರು ಟಿವಿಕೆ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದಕ್ಕೆ ಅಭಿನಂದನೆ ಸಲ್ಲಿಸಿದ್ದರು. ಇದೀಗ ಸಿ. ಜೋಸೆಫ್ ವಿಜಯ್ ಅವರು ಅಧಿಕಾರದ ಚುಕ್ಕಾಣಿ ಹಿಡಿದು ಮುಖ್ಯಮಂತ್ರಿ ಗದ್ದುಗೆ ಏರಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Published on: May 10, 2026 12:54 PM
Follow Us