Narendra Modi: 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 8:18 AM

ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡಿದ್ದಾರೆ.

ದೆಹಲಿ, ಆ.15: ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಧ್ವಜಾರೋಹಣ ಮಾಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ