ಪ್ರತಾಪ್ ಸಿಂಹರನ್ನು ನೋಡಿ ಬೆನ್ನು ತಟ್ಟಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚಿಸಿದ್ದಾರೆ. ಈ ವೇಳೆ ಬಿಜೆಪಿ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನುತಟ್ಟಿದ್ದಾರೆ.
ಮೈಸೂರು, ಏಪ್ರಿಲ್ 14: ಕರ್ನಾಟಕ ಲೋಕಸಭಾ ಪ್ರಚಾರದ ಅಖಾಡಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಧುಮುಕಿದ್ದಾರೆ. ಚುನಾವಣೆ ಘೋಷಣೆ ದಿನ ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ರಣಕಹಳೆ ಮೊಳಗಿಸಿದ್ದ ಮೋದಿ, ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನು ತಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

