ಮಾಲ್ಡೀವ್ಸ್‌ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅವರು ಮಾಲ್ಡೀವ್ಸ್‌ನ 60ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 60 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮವನ್ನೂ ಆಚರಿಸಲಾಗುವುದು. ದ್ವೀಪ ರಾಷ್ಟ್ರವು ತನ್ನ ವಜ್ರ ಮಹೋತ್ಸವವನ್ನು ಅಂದರೆ ಸ್ವಾತಂತ್ರ್ಯದ 60ನೇ ವಾರ್ಷಿಕೋತ್ಸವವನ್ನು ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಭವ್ಯ ಸಮಾರಂಭದೊಂದಿಗೆ ಆಚರಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಉಪಸ್ಥಿತಿಯು ತಿಂಗಳುಗಳ ರಾಜತಾಂತ್ರಿಕ ಉದ್ವಿಗ್ನತೆಯ ನಂತರ ಭಾರತ-ಮಾಲ್ಡೀವ್ಸ್ ಸಂಬಂಧಕ್ಕೆ ಸಕಾರಾತ್ಮಕ ತಿರುವು ನೀಡಿದೆ.
ಮಾಲೆ, ಜುಲೈ 26: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಲ್ಡೀವ್ಸ್‌ನ (Maldives) 60ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನದ ಮೇರೆಗೆ ಮೋದಿ ದ್ವೀಪ ರಾಷ್ಟ್ರಕ್ಕೆ ಎರಡು ದಿನಗಳ ಪ್ರವಾಸಕ್ಕೆ ತೆರಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ (PM Narendra Modi) ಮಾಲ್ಡೀವ್ಸ್‌ಗೆ ಆಗಮಿಸಿದರು. ದ್ವೀಪ ರಾಷ್ಟ್ರಕ್ಕೆ ಬಂದ ನಂತರ ಪ್ರಧಾನಿ ಮೋದಿ ಅವರು ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು ಮತ್ತು ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು. ಇಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮೋದಿ ಮಾಲ್ಡೀವ್ಸ್ನಿಂದ ತೆರಳಲಿದ್ದಾರೆ.
ದ್ವೀಪ ರಾಷ್ಟ್ರವು ತನ್ನ ವಜ್ರ ಮಹೋತ್ಸವವನ್ನು ಅಂದರೆ ಸ್ವಾತಂತ್ರ್ಯದ 60ನೇ ವಾರ್ಷಿಕೋತ್ಸವವನ್ನು ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಭವ್ಯ ಸಮಾರಂಭದೊಂದಿಗೆ ಆಚರಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಉಪಸ್ಥಿತಿಯು ತಿಂಗಳುಗಳ ರಾಜತಾಂತ್ರಿಕ ಉದ್ವಿಗ್ನತೆಯ ನಂತರ ಭಾರತ-ಮಾಲ್ಡೀವ್ಸ್ ಸಂಬಂಧಕ್ಕೆ ಸಕಾರಾತ್ಮಕ ತಿರುವು ನೀಡಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

